March 1, 2026
Sunday, March 1, 2026
spot_img

ಇರಾನ್-ಇಸ್ರೇಲ್ ಯುದ್ಧ ಕಾರ್ಮೋಡ: ಭಾರತ ಸರಕಾರದಿಂದ ಬಂತು ಫಸ್ಟ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮೇಲೆ ಇಸ್ರೇಲ್ -ಅಮೆರಿಕ ನಡೆಸಿದ ವೈಮಾನಿಕ ದಾಳಿ ಬಳಿಕ ವಿಶ್ವದಲ್ಲೇ ಆತಂಕ ಮನೆ ಮಾಡಿದ್ದು , ಭಾರತವು ಕೂಡ ಈ ಭೀಕರ ಉದ್ವಿಗ್ನತೆಯ ಕುರಿತು ತನ್ನ ಮೊದಲ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಶಾಂತಿ ಕಾಪಾಡುವಂತೆ ಎಲ್ಲಾ ರಾಷ್ಟ್ರಗಳಿಗೆ ಮನವಿ ಮಾಡಿದೆ. ಸಂಘರ್ಷದ ಹಾದಿಗಿಂತ ರಾಜತಾಂತ್ರಿಕ ಮಾತುಕತೆಗಳ ಮೂಲಕವೇ ಸಮಸ್ಯೆ ಬಗೆಹರಿಯಬೇಕು ಎಂದು ಭಾರತ ಸರ್ಕಾರ ತಿಳಿಸಿದೆ.

ದೆಹಲಿಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಣೆ ಬಿಡುಗಡೆ ಮಾಡಿದ್ದು, ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಿ ಸಂಯಮ ಕಾಯ್ದುಕೊಳ್ಳುವಂತೆ ಕೋರಲಾಗಿದೆ. ಯಾವುದೇ ಅಂತಾರಾಷ್ಟ್ರೀಯ ವಿವಾದಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯಿಂದ ಮಾತ್ರ ಪರಿಹರಿಸಲು ಸಾಧ್ಯ .ಯುದ್ಧದ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಭಾರತ ಪ್ರತಿಪಾದಿಸಿದೆ.

ಜೊತೆಗೆ ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ ಪ್ರಜೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿವೆ. ಅವರು ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರತೀಯ ನಾಗರಿಕರು ಸ್ಥಳೀಯ ಭದ್ರತಾ ಮಾರ್ಗದರ್ಶನವನ್ನು ಅನುಸರಿಸಬೇಕು ಮತ್ತು ರಾಯಭಾರ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ತಿಳಿಸಿದೆ. ಯಾವುದೇ ತುರ್ತು ಸಂದರ್ಭದಲ್ಲಿ ತಕ್ಷಣವೇ ಭಾರತೀಯ ದೂತಾವಾಸವನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !