ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಇಂದೂ ಹೆಚ್ಚಿನ ಭಾಗಗಳಲ್ಲಿ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಲಕ್ಷಣಗಳಿಲ್ಲದೆ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕಾಣಿಸಿಕೊಂಡಿರುವ ಒಣಹವೆ ಇಂದೂ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಾರ್ಚ್ ಎರಡನೇ ವಾರದಿಂದ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಸೂಚನೆ ನೀಡಿದ್ದು, ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ತೆರಳಬಾರದು ಎಂದು ಸಲಹೆ ನೀಡಿದೆ.



