October 17, 2026
Saturday, October 17, 2026
spot_img

ಟ್ರಂಪ್ ನಡೆಗೆ ಸಿದ್ದರಾಮಯ್ಯ ಆಕ್ಷೇಪ: ಇಸ್ರೇಲ್-ಅಮೆರಿಕ ಜಂಟಿ ದಾಳಿ ವಿರುದ್ಧ ಸಿಎಂ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ್ವ ನೀತಿಯೇ ಈ ಅಶಾಂತಿಗೆ ಕಾರಣ ಎಂದು ಕಿಡಿಕಾರಿದರು.

“ಒಂದೆಡೆ ಜಗತ್ತಿಗೆ ಶಾಂತಿಯ ಮಂತ್ರ ಪಠಿಸುತ್ತಾ, ಮತ್ತೊಂದೆಡೆ ಯುದ್ಧಕ್ಕೆ ಪ್ರಚೋದನೆ ನೀಡುತ್ತಿರುವುದು ಸರಿಯಲ್ಲ. ಇರಾನ್ ಪರಮೋಚ್ಛ ನಾಯಕ ಖಮೇನಿ ಅವರ ಹತ್ಯೆ ಅತ್ಯಂತ ಖಂಡನೀಯ,” ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ ಅವರು, ಅನಿವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

Must Read