March 1, 2026
Sunday, March 1, 2026
spot_img

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಹತ್ಯೆ: ಕಾರಣ ಏನೇ ಇರಲಿ ಕೃತ್ಯ ಖಂಡನಾರ್ಹ ಎಂದ ಪ್ರಿಯಾಂಕಾ ಗಾಂಧಿ ವಾದ್ರಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್‌ ಹಾಗೂ ಅಮೆರಿಕದ ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದ್ದು, ಈ ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಖಂಡಿಸಿದ್ದಾರೆ.

ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದು ಖಂಡನೆಗೆ ಅರ್ಹವಾಗಿದೆ ಎಂದು ಹೇಳಿದ್ದಾರೆ.

X ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದು ಮತ್ತು ಹಲವಾರು ಮುಗ್ಧ ಜನರನ್ನು ಕೊಂದಿರುವುದು ಹೇಯ ಮತ್ತು ಬಲವಾದ ಖಂಡನೆಗೆ ಅರ್ಹವಾಗಿದೆ, ಅದಕ್ಕೆ ಕಾರಣ ಏನೇ ಇರಲಿ, ಆದರೆಇಂತಹ ಕೃತ್ಯಗಳು ಖಂಡನಾರ್ಹ ಎಂದು ಹೇಳಿದ್ದಾರೆ.

ಯಾರು ಇಂತಹ ಕೃತ್ಯಗಳ ಉಸ್ತುವಾರಿ ವಹಿಸಿರುವವರು ಅವರು, ಮಹಾತ್ಮ ಗಾಂಧಿಯವರ ಮಾತುಗಳನ್ನು ನೆನಪಿಟ್ಟುಕೊಳ್ಳಬೇಕು. ಕಣ್ಣಿಗೆ ಕಣ್ಣು ಎಂಬ ಸೇಡು ಇಡೀ ಜಗತ್ತನ್ನು ಕುರುಡಾಗಿಸುತ್ತದೆ ಎಂಬುವುದನ್ನು ಇದನ್ನು ನೆನಪಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ವಾದ್ರಾ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದೆ ಸಜ್ಜನಿಕೆ ತೋರಿದ ಪ್ರಧಾನಿ, ಪೀಡಿತ ದೇಶಗಳಲ್ಲಿರುವ ಎಲ್ಲಾ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಾರೆ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !