March 1, 2026
Sunday, March 1, 2026
spot_img

ಇರಾನ್ ಮೇಲೆ ಕ್ಷಿಪಣಿ ದಾಳಿ: ಇಸ್ರೇಲ್ ರಕ್ಷಣಾ ಪಡೆಯಿಂದ ವಿಡಿಯೋ ಬಿಡುಗಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಸರ್ವೋಚ್ಛ ನಾಯಕ ಆಯತೊಲ್ಲ ಖಮೇನಿ ಹತ್ಯೆಗೈದಿದ್ದಾರೆ.

ಇತ್ತ ಟೆಹ್ರಾನ್‌ನಲ್ಲಿರುವ ಪ್ರಮುಖ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ವಿಡಿಯೋಗಳನ್ನು ಇಸ್ರೇಲ್ ರಕ್ಷಣಾ ಪಡೆಗಳು ಭಾನುವಾರ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬಿಡುಗಡೆಗೊಳಿಸಿದೆ.

ಇಸ್ರೇಲ್ ರಕ್ಷಾಣ ಪಡೆ ಪೋಸ್ಟ್‌ನಲ್ಲಿ , ಮೊದಲ ಬಾರಿಗೆ ಆಪರೇಷನ್ ‘ರೋರಿಂಗ್ ಲಯನ್’ ಪ್ರಾರಂಭವಾದ ನಂತರ , ಐಎಎಫ್ ಟೆಹ್ರಾನ್‌ನ ಹೃದಯಭಾಗದಲ್ಲಿರುವ ಇರಾನಿನ ಭಯೋತ್ಪಾದಕ ಆಡಳಿತಕ್ಕೆ ಸೇರಿದ ಕೇಂದ್ರಗಳ ಮೇಲೆ ದಾಳಿ ಮಾಡುತ್ತಿದೆ’ ಎಂದು ಬರೆದುಕೊಂಡಿದೆ.

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಇರಾನ್‌ನ ಹಲವು ಉನ್ನತ ಅಧಿಕಾರಿಗಳ ಹತ್ಯೆ ನಡೆದಿದೆ.

ಈ ದಾಳಿಗೆ ಪ್ರತೀಕಾರವಾಗಿ ಟೆಹ್ರಾನ್ ಕೂಡಾಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ.

ಈ ನಡುವೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಮಾತನಾಡಿದ ಆಂಟೋನಿಯಾ ಗುಟೆರೆಸ್, “ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಬೆದರಿಕೆಯಿದೆ. ಮಿಲಿಟರಿ ಕ್ರಮವು ಯಾರೂ ನಿಯಂತ್ರಿಸಲಾಗದ ಘಟನೆಗಳ ಸರಪಣಿಯನ್ನು ಸೃಷ್ಟಿಸುವ ಅಪಾಯವನ್ನು ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !