March 1, 2026
Sunday, March 1, 2026
spot_img

ಸಂಜು ಬೊಂಬಾಟ್ ಬ್ಯಾಟಿಂಗ್: ಸೆಮಿ ಫೈನಲ್ ಗೆ ಎಂಟ್ರಿಕೊಟ್ಟ ಭಾರತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

T20 ವಿಶ್ವಕಪ್‌ನ ಅಂತಿಮ ಸೂಪರ್ 8 ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದೆ.

ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 196 ರನ್‌ಗಳನ್ನು ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಂಜು ಸ್ಯಾಮ್ಸನ್ ಅದ್ಭುತ ಇನ್ನಿಂಗ್ಸ್‌ ನಿಂದ ಭಾರತ ಗೆದ್ದು ಸಂಭ್ರಮಿಸಿದೆ.

ಟಾರ್ಗೆಟ್ ಚೇಸ್ ಆರಂಭದಲ್ಲಿ ಅಭಿಷೇಕ್ ಶರ್ಮಾ ನಿರಾಸೆ ಮೂಡಿಸಿದೆ. ಶರ್ಮಾ ಕೇವಲ 10 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಇಶಾನ್ ಕಿಶನ್ ವಿಕೆಟ್ ಪತನಗೊಂಡಿತ್ತು. ಆದರೆ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ನಾಯಕ ಸೂರ್ಯಕುಮಾರ್ ಯಾದವ್ ಕೇವಲ 18 ರನ್ ಸಿಡಿಸಿ ನಿರ್ಗಮಿಸಿದರು.

ತಿಲಕ್ ವರ್ಮಾ ಜೊತೆ ಸಂಜು ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದರು. ತಿಲಕ್ ವರ್ಮಾ 27 ರನ್ ಸಿಡಿಸಿ ನಿರ್ಗಮಿಸಿದರು. ಸಂಜು ಸ್ಯಾಮ್ಸನ್ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಯಾಟಕ್ಕೆ ತಂಡವನ್ನು ಗೆಲುವಿನ ದಡ ಸೇರಿಸಬೇಕಾದ ಜವಾಬ್ದಾರಿ ಹೆಗಲೇರಿತ್ತು. ಅಂತಿಮವಾಗಿ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿ ಭಾರತಕ್ಕೆ ಅದ್ಭುತ ಗೆಲುವು ನೀಡಿದರು.

ಭಾರತ ತಂಡವು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !