ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಒಣಹವೆ ಮುಂದುವರಿದಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.



