March 2, 2026
Monday, March 2, 2026
spot_img

ಅಲ್ಲು ಮನೆ ಮದುವೆಯಲ್ಲಿ ವಿರೋಷ್ ಜೋಡಿ: ಹಳದಿ ಸಂಭ್ರಮದಲ್ಲಿ ಪಾಲ್ಗೊಂಡ ನವದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲುಗು ಚಿತ್ರರಂಗದಲ್ಲಿ ಮದುವೆ ಸಂಭ್ರಮಗಳ ಸರಮಾಲೆ ಮುಂದುವರಿದಿದೆ. ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಕಿರಿಯ ಸಹೋದರ ಅಲ್ಲುಸಿರೀಶ್ ಮಾರ್ಚ್ 6 ರಂದು ನಯನಿಕಾ ರೆಡ್ಡಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆ ಪೂರ್ವ ಕಾರ್ಯಕ್ರಮಗಳು ಈಗಾಗಲೇ ಆರಂಭವಾಗಿದ್ದು, ಇಂದು ನಡೆದ ಹಳದಿ ಸಮಾರಂಭದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ವೈವಾಹಿಕ ಜೀವನ ಆರಂಭಿಸಿದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವೆರಕೊಂಡ ಕೂಡ ಹಾಜರಾಗಿ ಎಲ್ಲರ ಗಮನ ಸೆಳೆದರು. ಅಲ್ಲು ಅರ್ಜುನ್ ಜೊತೆ ಅವರು ತೆಗೆಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ:

ಇನ್ನೊಂದೆಡೆ, ತಮ್ಮ ಆರತಕ್ಷತೆ ಸಮಾರಂಭದ ಸಿದ್ಧತೆಯಲ್ಲಿ ತೊಡಗಿರುವ ರಶ್ಮಿಕಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದರು. ಮುಖ್ಯಮಂತ್ರಿಯವರ ಕುಟುಂಬವು ನವ ದಂಪತಿಗಳಿಗೆ ಶುಭಾಶಯ ಕೋರಿದೆ.

ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ವಿಜಯ್–ರಶ್ಮಿಕಾ ಆರತಕ್ಷತೆ ನಡೆಯಲಿದ್ದು, ಚಿತ್ರರಂಗದ ಅನೇಕ ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !