September 26, 2026
Saturday, September 26, 2026
spot_img

ಶಿವಮೊಗ್ಗದಲ್ಲಿ ಹತ್ಯೆಯಾದ ಬಾಲಕನ ಕುಟುಂಬಕ್ಕೆ 15 ಲಕ್ಷ ರೂ. ಚೆಕ್‌ ನೀಡಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಿನ್ನಕೋಮಿನ ಬಾಲಕರು ನಡೆಸಿದ ಹಲ್ಲೆಯಿಂದಾಗಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಚೆಕ್‌ ವಿತರಣೆ ಮಾಡಿದ್ದಾರೆ.

ಶಿವಮೊಗ್ಗ ಏರ್‌ಪೋರ್ಟ್‌ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸಂಕೇತ್‌ ಕುಟುಂಬವನ್ನು ಏರ್‌ಪೋರ್ಟ್‌ಗೆ ಕರೆಸಿಕೊಂಡಿದ್ದಾರೆ. ಅಲ್ಲಿ ಚೆಕ್‌ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ರೂ.10 ಲಕ್ಷ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವೈಯಕ್ತಿಕವಾಗಿ ಕೊಟ್ಟ ರೂ. 5 ಲಕ್ಷ ಪರಿಹಾರ ಮೊತ್ತದ ಚೆಕ್‌ ಅನ್ನು ಸಂಕೇತ್ ತಂದೆ ಶಿವಕುಮಾರ್‌ಗೆ ವಿತರಿಸಿದರು.

ಇತ್ತೀಚೆಗೆ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿ, ಸ್ನೇಹಿತನ ಪರ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

Must Read