April 19, 2026
Sunday, April 19, 2026
spot_img

ಇರಾನ್–ಇಸ್ರೇಲ್ ಉದ್ವಿಗ್ನತೆ | ಕನ್ನಡಿಗರ ಸುರಕ್ಷಿತ ವಾಪಸ್ಸಿಗೆ ಕೇಂದ್ರ ಸಿದ್ಧ: ಸಚಿವ ಪ್ರಲ್ಹಾದ್ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್–ಇಸ್ರೇಲ್ ಸಂಘರ್ಷ ತೀವ್ರವಾಗಿರುವ ಹಿನ್ನೆಲೆ ವಿದೇಶಗಳಲ್ಲಿ ಸಂಕಷ್ಟಕ್ಕೊಳಗಾದ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸಜ್ಜಾಗಿದೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ ಎಂದರು.

ಉಕ್ರೇನ್ ಸಂಕಷ್ಟದ ವೇಳೆ ಭಾರತೀಯರನ್ನು ಯಶಸ್ವಿಯಾಗಿ ವಾಪಸ್ ಕರೆತಂದ ಅನುಭವವಿರುವುದರಿಂದ, ಈಗಲೂ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡಿಗರು ಮಾತ್ರವಲ್ಲದೆ, ವಿಶ್ವದ ಯಾವುದೇ ಭಾಗದಲ್ಲಿದ್ದರೂ ಭಾರತೀಯರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಸವಾಲಿನದ್ದಾಗಿರುವುದರಿಂದ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುತ್ತಿದೆ. ವಿಧಾನಪರಿಷತ್ ಸದಸ್ಯ ಭೋಜೇಗೌಡ ಸೇರಿದಂತೆ ಸಂಕಷ್ಟದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಇದಲ್ಲದೆ, ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೂ ವಿಶೇಷ ಗಮನ ನೀಡಲಾಗಿದೆ. ಸದ್ಯ ವಿಮಾನ ಹಾರಾಟ ಸ್ಥಗಿತಗೊಂಡಿರುವುದರಿಂದ ಪರ್ಯಾಯ ಮಾರ್ಗಗಳ ಕುರಿತು ಚರ್ಚೆ ನಡೆಯುತ್ತಿದೆ. ಯಾರೂ ಆತಂಕಪಡಬೇಕಿಲ್ಲ, ಸರ್ಕಾರ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರಲು ಬದ್ಧವಾಗಿದೆ ಎಂದು ಜೋಶಿ ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !