March 2, 2026
Monday, March 2, 2026
spot_img

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ ಭಾರತದ ಮೇಲೂ ಕಾಣಿಸಬಹುದು: ರಾಜ್ಯಗಳಿಗೆ ಕೇಂದ್ರದ ಭದ್ರತಾ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್–ಅಮೆರಿಕಾ–ಇಸ್ರೇಲ್ ದಾಳಿ-ಪ್ರತಿದಾಳಿಗಳ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವುದರಿಂದ, ಅದರ ಪರಿಣಾಮ ಭಾರತದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ಫೆಬ್ರವರಿ 28ರಂದು ಜಾರಿಯಾದ ಸುತ್ತೋಲೆಯಲ್ಲಿ, ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಭದ್ರತಾ ಸಂಸ್ಥೆಗಳು ಕಾನೂನು-ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಜಾಗ್ರತೆ ವಹಿಸಬೇಕೆಂದು ಸೂಚಿಸಲಾಗಿದೆ.

ಧಾರ್ಮಿಕ ಸಭೆಗಳು ಮತ್ತು ಸಾರ್ವಜನಿಕ ಕೂಟಗಳಲ್ಲಿ ಉದ್ರೇಕಕಾರಿ ಭಾಷಣಗಳ ಮೂಲಕ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇರುವುದರಿಂದ, ಇಂತಹ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಲಾಗಿದೆ. ಇರಾನ್ ಪರ ಪ್ರಚಾರ ನಡೆಸಿ ಉದ್ವಿಗ್ನತೆ ಉಂಟುಮಾಡುವ ಅಂಶಗಳನ್ನು ಗುರುತಿಸಿ ಮೇಲ್ವಿಚಾರಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಗುಪ್ತಚರ ಸಂಸ್ಥೆಗಳು ಮತ್ತು ಸ್ಥಳೀಯ ಭದ್ರತಾ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಅನಾಹುತ ತಪ್ಪಿಸಬೇಕು ಎಂದು ಕೇಂದ್ರ ಒತ್ತಿಹೇಳಿದೆ.

ಇನ್ನುಳಿದಂತೆ ಅಮೆರಿಕಾ–ಇಸ್ರೇಲ್ ದಾಳಿಯಲ್ಲಿ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿನ ವಿರುದ್ಧ ಶಿಯಾ ಸಮುದಾಯದವರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿರುವುದು ಗಮನಾರ್ಹವಾಗಿದೆ. ಪರಿಸ್ಥಿತಿಯನ್ನು ನಿಗಾದಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !