March 3, 2026
Tuesday, March 3, 2026
spot_img

ಆಸ್ಟಿನ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಇಬ್ಬರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅವರಲ್ಲಿ ಒಬ್ಬರು ಭಾರತೀಯ ಮೂಲದವರಾಗಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು 21 ವರ್ಷದ ಸವಿತಾ ಶಾನ್ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಇನ್ನೂ 14 ಮಂದಿ ಗಾಯಗೊಂಡಿದ್ದಾರೆ.

ಪೊಲೀಸರ ಮಾಹಿತಿಯಂತೆ, 53 ವರ್ಷದ ನ್ಡಿಯಾಗಾ ಡಯಾಗ್ನೆ ಎಂಬ ವ್ಯಕ್ತಿ ಭಾನುವಾರ ಬೆಳಗ್ಗೆ ಬಿಯರ್ ಗಾರ್ಡನ್ ಸಮೀಪ ಕಾರು ನಿಲ್ಲಿಸಿ ಜನರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಬಳಿಕ ಕಾರಿನಿಂದ ಇಳಿದು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೂ ರೈಫಲ್‌ನಿಂದ ದಾಳಿ ಮುಂದುವರಿಸಿದ್ದಾನೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಗುಂಡಿಕ್ಕಿ ಹೊಡೆದು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ:

ತನಿಖೆಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನಡೆಸುತ್ತಿದೆ. ದಾಳಿಕೋರ ಆರೋಪಿ ಇರಾನ್ ಧ್ವಜದ ಚಿಹ್ನೆ ಧರಿಸಿದ್ದನೆಂಬ ಮಾಹಿತಿ ಲಭ್ಯವಾಗಿದ್ದು, ದಾಳಿಯ ಹಿನ್ನಲೆ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿವೆ.

ಸವಿತಾ ಶಾನ್ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ನಿರ್ವಹಣಾ ಮಾಹಿತಿ ವ್ಯವಸ್ಥೆಗಳಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದರು. ಈ ವರ್ಷ ಪದವಿ ಪಡೆಯುವ ನಿರೀಕ್ಷೆಯಲ್ಲಿದ್ದ ಅವರು ಆಸ್ಟಿನ್ ತಮಿಳು ಸಂಘದಲ್ಲಿ ಸ್ವಯಂಸೇವಕಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !