ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲೇ ಆಯೋಜಿಸಲು ಚಿತ್ರತಂಡ ತೀರ್ಮಾನಿಸಿದೆ.
ಮಾರ್ಚ್ 8, ಭಾನುವಾರ ಈ ಕಾರ್ಯಕ್ರಮ ನಡೆಯಲಿದ್ದು, ದೊಡ್ಡ ಮಟ್ಟದ ಪ್ರೆಸ್ ಮೀಟ್ ಕೂಡ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ. ಕಾರ್ಯಕ್ರಮದ ನಿಖರ ಸಮಯ ಮತ್ತು ಸ್ಥಳವನ್ನು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಟ್ರೈಲರ್ ಬಿಡುಗಡೆ ಓಪನ್ ಗ್ರೌಂಡ್‌ನಲ್ಲಿ ಅಲ್ಲ, ಬದಲಾಗಿ ನಗರದ ಪ್ರಮುಖ ಮಲ್ಟಿಪ್ಲೆಕ್ಸ್‌ನಲ್ಲಿ ನಡೆಯಲಿದೆ. ಕರ್ನಾಟಕದ ಪತ್ರಕರ್ತರ ಜೊತೆಗೆ ಇತರೆ ಭಾಷೆಗಳ ಸಿನಿಮಾ ಮಾಧ್ಯಮ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಇವೆಂಟ್‌ಗೆ ರಾಷ್ಟ್ರೀಯ ಮಟ್ಟದ ಗಮನ ಸೆಳೆಯುವ ಸಾಧ್ಯತೆ ಇದೆ.
ಇದನ್ನೂ ಓದಿ:
ಇದಲ್ಲದೆ, ಚಿತ್ರದ ‘ತಬಾಹಿ’ ಹಾಡು ಈಗಾಗಲೇ ವೈರಲ್ ಆಗಿದ್ದು, ಯೋಗರಾಜ್ ಭಟ್ ಬರೆದ ಸಾಹಿತ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೆಲವು ಮಂದಿ ಲಿರಿಕಲ್ ವಿಡಿಯೋ ಬದಲು ಪೂರ್ಣ ವಿಡಿಯೋ ಬಿಡುಗಡೆ ಆಗಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಯಶ್ ಸಹ ಕತೆ ರಚನೆ ಮಾಡಿದ್ದಾರೆ. ಕೆವಿಎನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ಟಾಕ್ಸಿಕ್’ ಮಾರ್ಚ್ 19ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.



