July 12, 2026
Sunday, July 12, 2026
spot_img

War | ದುಬೈನಲ್ಲಿ US ಆರ್ಮಿ ಕಟ್ಟಡ, ಆಸ್ಟ್ರೇಲಿಯಾದ ವಾಯುನೆಲೆ ಮೇಲೆ ದಾಳಿ: ಎಲ್ಲಾ ಪೀಸ್ ಪೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಲ್ಫ್ ಪ್ರದೇಶದಲ್ಲಿ ಅಮೆರಿಕ–ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ದುಬೈನಲ್ಲಿ ಅಮೆರಿಕ ಪಡೆಗಳಿಗೆ ಸಂಬಂಧಿಸಿದೆ ಎನ್ನಲಾದ ಕಟ್ಟಡದ ಮೇಲೆ ದಾಳಿ ನಡೆದಿರುವ ಮಾಹಿತಿ ಹೊರಬಂದಿದೆ.

ದಾಳಿಯಲ್ಲಿ ಕಟ್ಟಡ ಹಾನಿಗೊಳಗಾದರೂ, ನಷ್ಟದ ಪ್ರಮಾಣ ಅಥವಾ ಸಾವು–ನೋವುಗಳ ಬಗ್ಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಇರಾನ್ ತನ್ನ ಕ್ರಮಗಳು ಗಲ್ಫ್ ಪ್ರದೇಶದಲ್ಲಿನ ಅಮೆರಿಕನ್ ಪಡೆಗಳನ್ನೇ ಗುರಿಯಾಗಿರಿಸಿಕೊಂಡಿವೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮತ್ತೊಂದೆಡೆ ದುಬೈ ಸಮೀಪದ ಅಲ್ ಮಿನ್ಹಾದ್ ವಾಯುನೆಲೆಯಲ್ಲಿರುವ ಆಸ್ಟ್ರೇಲಿಯಾ ಸೈನಿಕ ಸೌಲಭ್ಯಗಳ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ:

ಆದರೆ ಆಸ್ಟ್ರೇಲಿಯಾ ರಕ್ಷಣಾ ಸಚಿವ ರಿಚರ್ಡ್ ಮಾರ್ಲೆಸ್ ತಮ್ಮ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. ಯುಎಇ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ನೂರಕ್ಕೂ ಹೆಚ್ಚು ಆಸ್ಟ್ರೇಲಿಯಾ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ ಎಂಬ ಮಾಹಿತಿ ನೀಡಿದರು.

ಇದನ್ನೊಳಗೊಂಡಂತೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ “ಟ್ರುಥ್‌ಫುಲ್ ಪ್ರಾಮಿಸ್ 4” ಕಾರ್ಯಾಚರಣೆಯಡಿ ಅಮೆರಿಕ ಸೇನಾ ನೆಲೆಗಳನ್ನೇ ಗುರಿಯಾಗಿಸಿ ದಾಳಿ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದೆ. ಗಲ್ಫ್ ರಾಷ್ಟ್ರಗಳಲ್ಲಿ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳ ವರದಿ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !