ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರ 52ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಬಾರಿಸಿ ಭಾರತವನ್ನು ಸೆಮಿಫೈನಲ್‌ಗೆ ಕೊಂಡೊಯ್ದ ಸಂಜು ಸ್ಯಾಮ್ಸನ್ ಇದೀಗ ನಿಯಮ ಉಲ್ಲಂಘನೆ ಚರ್ಚೆಯಲ್ಲಿ ಸಿಲುಕಿದ್ದಾರೆ.
ಗೆಲುವಿನ ಸಂಭ್ರಮದಲ್ಲಿ ಹೆಲ್ಮೆಟ್ ಅನ್ನು ಮೈದಾನಕ್ಕೆ ಎಸೆದ ಘಟನೆ ಐಸಿಸಿ ನೀತಿ ಸಂಹಿತೆಯ ಅಡಿಯಲ್ಲಿ ಈಗ ಪರಿಶೀಲನೆಯಲ್ಲಿದೆ.
ಐಸಿಸಿ ನಿಯಮಗಳ ಪ್ರಕಾರ ಕ್ರಿಕೆಟ್ ಉಪಕರಣಗಳನ್ನು ದುರುಪಯೋಗಪಡಿಸಿಕೊಳ್ಳುವುದು ಲೆವೆಲ್–1 ಉಲ್ಲಂಘನೆಗೆ ಒಳಪಡುವ ಸಾಧ್ಯತೆ ಇದೆ. ಇದಕ್ಕೆ ಪಂದ್ಯ ಶುಲ್ಕದ 50 ಶೇಕಡಾ ದಂಡ ಅಥವಾ ಎಚ್ಚರಿಕೆಯೊಂದಿಗೆ ಡಿಮೆರಿಟ್ ಪಾಯಿಂಟ್ ವಿಧಿಸಬಹುದು.
ಇದನ್ನೂ ಓದಿ:
ಮ್ಯಾಚ್ ರೆಫರಿ ಈ ನಡೆ ಕ್ರೀಡಾ ಮನೋಭಾವಕ್ಕೆ ವಿರುದ್ಧ ಎಂದು ಪರಿಗಣಿಸಿದರೆ ಕ್ರಮ ಕೈಗೊಳ್ಳಬಹುದು. ಆದರೆ ಇದು ಮೊದಲ ತಪ್ಪಾಗಿದ್ದರೆ ನೇರ ನಿಷೇಧ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ.
ಇನ್ನು ಮಾರ್ಚ್ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ–ಇಂಗ್ಲೆಂಡ್ ಸೆಮಿಫೈನಲ್ ನಡೆಯಲಿದೆ. ಮತ್ತೊಂದು ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಫೈನಲ್ ಮಾರ್ಚ್ 8ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.



