March 3, 2026
Tuesday, March 3, 2026
spot_img

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಸಿಲಿಕಾನ್ ಸಿಟಿಯಲ್ಲೂ ನಡೆಯುತ್ತೆ IPL ಮ್ಯಾಚ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಮುಗಿದ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭಕ್ಕೆ ಕ್ಷಣಗಣನೆ ಶುರುವಾಗಲಿದ್ದು, ಎಲ್ಲಾ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಿನ್ನಸ್ವಾಮಿ ಕ್ರೀಡಾಂಗದಲ್ಲಿ ಪಂದ್ಯ ಆಡಲು ಇದ್ದೀಯಾ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ಬಾರಿಯ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡಲು ಆರ್‌ಸಿಬಿ ತಂಡ ಅಧಿಕೃತವಾಗಿ ಒಪ್ಪಿಗೆ ಸೂಚಿಸಿದೆ.

ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಘಟನೆಯ ನಂತರ, ಕ್ರೀಡಾಂಗಣದ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಮತ್ತು ಭದ್ರತಾ ಮಂಡಳಿ ಸೂಚಿಸಿದ ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಂಡವು ಸಮ್ಮತಿಸಿದೆ.

ಹೀಗಾಗಿ ಐಪಿಎಲ್‌ನ ಉದ್ಘಾಟನಾ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಯಲಿದ್ದು, ಆತಿಥೇಯ ಆರ್‌ಸಿಬಿ ತಂಡವು ಇಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಿದೆ.

ಸದ್ಯ ಕ್ರೀಡಾಂಗಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದ್ದು, ಕ್ರಿಕೆಟ್ ಹಬ್ಬಕ್ಕೆ ರಾಜಧಾನಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !