March 3, 2026
Tuesday, March 3, 2026
spot_img

ಬೆಳಗಾವಿ ಕೋರ್ಟ್ ಗೆ ಬಂತು ಬಾಂಬ್ ಬೆದರಿಕೆ ಮೇಲ್: ಡಾಗ್ ಸ್ಕ್ವಾಡ್ ದೌಡು

ಹೊಸ ದಿಗಂತ ವರದಿ, ಬೆಳಗಾವಿ :

ಹೋಳಿ ಹಬ್ಬದ ದಿನವೇ ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದೆ.

ಮಂಗವಾರ ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಜಡ್ಜ್ (ಪಿಡಿಜೆ) ಅವರ ಇಮೇಲ್ಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದಿರುವುದಾಗಿ ತಿಳಿದುಬಂದಿದೆ. ಇಮೇಲ್ ಬಂದ ತಕ್ಷಣವೇ ಕೋರ್ಟ್ ಆವರಣದಲ್ಲಿ ಫುಲ್ ಅಲರ್ಟ್ ಘೋಷಿಸಲಾಯಿತು.

ತಕ್ಷಣವೇ ಬೆಳಗಾವಿ ಜಿಲ್ಲಾ ನ್ಯಾಯಾಲಯ ಆವರಣಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ತಂಡಗಳು ದೌಡಾಯಿಸಿ ಪರಿಶೀಲನೆ ನಡೆಸಿದವು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿಸಿದರು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಎಲ್ಲಾ ಕೋರ್ಟ್ ಕಲಾಪಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಯಿತು. ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆವರಣದಿಂದ ಹೊರಗೆ ಬಂದು ನಿಂತು ಕೆಲಕಾಲ ಆತಂಕದಲ್ಲಿದ್ದರು.

ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಮೇಲ್ ಮೂಲ ಪತ್ತೆಗೆ ಮುಂದಾಗಿದ್ದಾರೆ.


ಪರಿಶೀಲನೆ ವೇಳೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !