October 17, 2026
Saturday, October 17, 2026
spot_img

ದುಬೈನಲ್ಲಿ ಸಿಲುಕಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಬೆಂಗಳೂರಿಗೆ ವಾಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದ ಉದ್ವಿಗ್ನತೆ ಕಾರಣದಿಂದ ದುಬೈನಲ್ಲಿ ಸಿಲುಕಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಅವರು ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ ಹಿನ್ನೆಲೆ ಬರ್ಮಿಂಗ್‌ಹ್ಯಾಮ್‌ಗೆ ಪಿ.ವಿ.ಸಿಂಧು ಪ್ರಯಾಣ ಬೆಳೆಸಿದ್ದರು. ಆದರೆ ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡಿದ್ದರು. ಇದೀಗ ಕೆಲವು ದಿನಗಳ ಕಾಲ ಕಳೆದ ನಂತರ ತಾಯ್ನಾಡಿಗೆ ಕ್ಷೇಮವಾಗಿ ಮರಳಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಂಧು, ಸುರಕ್ಷಿತವಾಗಿ ಬೆಂಗಳೂರಿಗೆ ಹಿಂತಿರುಗಿದ್ದೇನೆ. ತುಂಬಾ ಕಷ್ಟದ ಸಮಯದಲ್ಲಿ ಸಹಾಯ ಮಾಡಿದ ದುಬೈ ಅಧಿಕಾರಿಗಳು, ವಿಮಾನ ನಿಲ್ದಾಣ ಸಿಬ್ಬಂದಿ ಎಲ್ಲರಿಗೂ ಧನ್ಯವಾದಗಳು ಎಂದು ಕೃತಜ್ಞತೆ ತಿಳಿಸಿದ್ದಾರೆ.

Must Read