ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಕ್ಷಣಾ ಸಚಿವಾಲಯವು ನವದೆಹಲಿಯಲ್ಲಿ ₹5,083 ಕೋಟಿ ಮೌಲ್ಯದ ಎರಡು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದೆ.
ಇದರಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ (ICG) ಆರು ಸುಧಾರಿತ ಲಘು ಹೆಲಿಕಾಪ್ಟರ್‌ಗಳ (ALH Mk-III) ಖರೀದಿಗಾಗಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಜೊತೆ ₹2,901 ಕೋಟಿ ಮೊತ್ತದ ಒಪ್ಪಂದ ಮಾಡಿಕೊಳ್ಳಲಾಗಿದೆ.
ಈ ಅವಳಿ ಇಂಜಿನ್ ಹೆಲಿಕಾಪ್ಟರ್‌ಗಳು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದು, ಕಡಲ ಭದ್ರತೆ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಇದರೊಂದಿಗೆ ಭಾರತೀಯ ನೌಕಾಪಡೆಗಾಗಿ ‘ಶ್ಟಿಲ್’ (Shtil) ಕ್ಷಿಪಣಿಗಳ ಖರೀದಿಗೆ ಮತ್ತೊಂದು ಒಪ್ಪಂದ ಮಾಡಿಕೊಳ್ಳಲಾಗಿದ್ದು, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆದಿದೆ. ಈ ಯೋಜನೆಗಳು ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆಯನ್ನು ಮತ್ತಷ್ಟು ಬಲಪಡಿಸಲಿವೆ.



