April 29, 2026
Wednesday, April 29, 2026
spot_img

ಮಧು ಬಂಗಾರಪ್ಪ ಜನ್ಮದಿನ: ಪೌರಕಾರ್ಮಿಕರು, ಸರ್ಕಾರಿ ಶಾಲಾ ಪುಟಾಣಿಗಳಿಗೆ ಫ್ರೀ ಫ್ಲೈಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮದಿನದಂದು ಇತರರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ, ತಮ್ಮ ಜನ್ಮದಿನದಂದು ಪೌರಕಾರ್ಮಿಕರು ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಮಾಡಿಸಿದ್ದಾರೆ.

ಸೊರಬ ಕ್ಷೇತ್ರದ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರು ಹಾಗೂ ಶಾಲಾ ಮಕ್ಕಳಿಗೆ ವಿಮಾನಯಾನ ಮಾಡಿಸಿ ಖುಷಿಪಟ್ಟಿದ್ದಾರೆ.

ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ ಮಾಡಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ 36 ಜನ ಪೌರ ಕಾರ್ಮಿಕರು, ಸೊರಬ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಪಡೆದ 30 ಮಕ್ಕಳು ಮತ್ತು ಅವರ ಪೋಷಕರು ಸೇರಿದಂತೆ ಒಟ್ಟು 60 ಜನ ಸೇರಿದಂತೆ 100ಕ್ಕೂ ಹೆಚ್ಚು ಜನರು ವಿಮಾನದಲ್ಲಿ ಪ್ರಯಾಣಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !