May 18, 2026
Monday, May 18, 2026
spot_img

ದುಬೈ ಮೇಲೆ ಮತ್ತೆ ಇರಾನ್ ನಿಂದ ಡ್ರೋನ್ ದಾಳಿ: ಅಮೆರಿಕ ರಾಯಭಾರಿ ಕಚೇರಿ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ ಡ್ರೋನ್‌ ದಾಳಿ ಮಾಡಿದೆ.

ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಜನ ಭಯಭೀತರಾಗಿದ್ದಾರೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ.

ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ಡಿಕ್ಕಿ ಹೊಡೆದಿದ್ದು, ಸಣ್ಣ ಪ್ರಮಾಣದ ಬೆಂಕಿ ಹೊತ್ತಿಕೊಂಡಿತ್ತು. ಸೋಮವಾರ ಕುವೈತ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಕಟ್ಟಡದಿಂದ ಹೊಗೆ ಬಂದಿದೆ.

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ದಾಳಿ ನಡೆದಿರುವುದು ನಿಜ ಎಂದು ದೃಢಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !