ಹೊಸದಿಗಂತ ಕಲಬುರಗಿ:
ಕಲಬುರಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ವಾರ್ಡ್ ನಂಬರ್ -೫೨ರ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಗುರುರಾಜ ದೇಸಾಯಿ ಅವರನ್ನು ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಸರ್ವಾನುಮತದೊಂದಿಗೆ ನಿಯುಕ್ತಿಗೊಳಿಸಲಾಗಿದೆ ಎಂದು ಬಿಜೆಪಿ ಕಲಬುರಗಿ ಮಹಾನಗರ ಘಟಕದ ಜಿಲ್ಲಾಧ್ಯಕ್ಷ ಚಂದ್ರಕಾಂತ ಪಾಟೀಲ್ ತಿಳಿಸಿದ್ದಾರೆ.
ಗುರುವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಓರ್ವ ಮಹಿಳೆ,ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದು,ಸದರಿಯವರಿಗೆ ಮುಂಬರುವ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರೆಂದು ಘೋಷಿಸಿ ಸೂಕ್ತ ಸ್ಥಾನಮಾನ ಪೂರೈಸುವಂತೆ ಈ ಮೂಲಕ ತಿಳಿಸಿದ್ದಾರೆ.ಇನ್ನೂ ಆ.೩೦ರಂದು ಶನಿವಾರ ಬೆಳಗ್ಗೆ ಪಾಲಿಕೆಯ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಬೆಳಿಗ್ಗೆ ೧೦-೩೦ಕ್ಕೆ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದರು.