March 4, 2026
Wednesday, March 4, 2026
spot_img

ಸ್ಯಾಮ್ಸನ್ ಅಬ್ಬರಕ್ಕೆ ನಡುಗಿದ ರ‍್ಯಾಂಕಿಂಗ್ ಪಟ್ಟಿ: ಐಸಿಸಿ ಪಟ್ಟಿಯಲ್ಲಿ ಭಾರತೀಯರದ್ದೇ ದರ್ಬಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2026ರ ಟಿ20 ವಿಶ್ವಕಪ್ ಸಮರ ಕಾವೇರಿರುವಂತೆಯೇ, ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಆಟಗಾರರು ಸಿಂಹಪಾಲು ಪಡೆದಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿನ ಪ್ರಗತಿ ಸಾಧಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಕೇವಲ 3 ರನ್‌ಗಳಿಂದ ಶತಕ ವಂಚಿತರಾಗಿ (97* ರನ್) ಅಬ್ಬರಿಸಿದ್ದ ಸಂಜು ಸ್ಯಾಮ್ಸನ್, ಶ್ರೇಯಾಂಕ ಪಟ್ಟಿಯಲ್ಲಿ ಬರೋಬ್ಬರಿ 25 ಸ್ಥಾನಗಳ ಏರಿಕೆ ಕಂಡಿದ್ದಾರೆ. ಈ ಮೊದಲು 65ನೇ ಸ್ಥಾನದಲ್ಲಿದ್ದ ಸಂಜು, ಈಗ 549 ರೇಟಿಂಗ್ ಪಾಯಿಂಟ್‌ಗಳೊಂದಿಗೆ 40ನೇ ಸ್ಥಾನಕ್ಕೇರಿದ್ದಾರೆ.

ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಬ್ಯಾಟಿಂಗ್ ಪಟ್ಟಿಯಲ್ಲಿ ವಿಶ್ವದ ನಂಬರ್ 1 ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಇಶಾನ್ ಕಿಶನ್: ಒಂದು ಸ್ಥಾನ ಬಡ್ತಿ ಪಡೆದು 5ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ತಿಲಕ್ ವರ್ಮಾ: ಏಳನೇ ಸ್ಥಾನದಿಂದ 6ನೇ ಸ್ಥಾನಕ್ಕೇರಿ ಮಿಂಚುತ್ತಿದ್ದಾರೆ.

ನಾಯಕ ಸೂರ್ಯಕುಮಾರ್ ಯಾದವ್ ಅವರು ಅಲ್ಪ ಹಿನ್ನಡೆ ಅನುಭವಿಸಿ 7ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬೌಲಿಂಗ್ ವಿಭಾಗದಲ್ಲೂ ಭಾರತೀಯರ ಪ್ರಾಬಲ್ಯ ಮುಂದುವರಿದಿದ್ದು, ಸ್ಪಿನ್ ಮಾಂತ್ರಿಕ ವರುಣ್ ಚಕ್ರವರ್ತಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ವಿಶ್ವದ ಅತ್ಯುತ್ತಮ ವೇಗಿ ಬುಮ್ರಾ ಒಂದು ಸ್ಥಾನ ಮೇಲೇರಿ 7ನೇ ಸ್ಥಾನ ಅಲಂಕರಿಸಿದ್ದಾರೆ.

ಈ ಪಟ್ಟಿಯಲ್ಲಿ ದೊಡ್ಡ ಸುಧಾರಣೆ ಕಂಡಿರುವ ಅರ್ಶ್‌ದೀಪ್, ಬರೋಬ್ಬರಿ ಆರು ಆಟಗಾರರನ್ನು ಹಿಂದಿಕ್ಕಿ 13ನೇ ಸ್ಥಾನಕ್ಕೆ ತಲುಪಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !