September 26, 2026
Saturday, September 26, 2026
spot_img

ರಾಜ್ಯದಲ್ಲಿ ವೈದ್ಯಾಧಿಕಾರಿಗಳ ಮುಷ್ಕರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ರು?

ಹೊಸದಿಗಂತ ವರದಿ ಮಂಗಳೂರು:

ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಾಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಬುಧವಾರ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಸೇವೆ ಜನರಿಗೆ ಅತ್ಯಂತ ಅಗತ್ಯ ಸೇವೆಯಾಗಿದ್ದು, ಇದನ್ನು ಸ್ಥಗಿತಗೊಳಿಸುತ್ತೇವೆ ಎಂದು ಹೇಳುವುದು ಪಾಪದ ಕೆಲಸ. ಈಗಾಗಲೇ ವೈದ್ಯರ ಬಹುತೇಕ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಈ ಹಿಂದಿನಿಂದಲೂ ಹಲವು ಬೇಡಿಕೆಗಳನ್ನು ವೈದ್ಯರು ಇಟ್ಟಿದ್ದು, ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹೆಚ್ಚಿನ ಬೇಡಿಕೆಗಳು ಈಡೇರಿವೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಊಹೆಗಳಿಗೆ ಉತ್ತರ ಕೊಡುವುದಿಲ್ಲ.ಸಿಎಂ ಸ್ಥಾನಕ್ಕೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಡಿಕೆಶಿಯವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಚುನಾವಣೆ ಗೆದ್ದಿದ್ದೇವೆ ಎಂದರು.

Must Read