ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದು, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ಮಾತನ್ನು ಆಡಿದ್ದಾರೆ. ಡಿಕೆಶಿ ಅವರು ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ. ದಸರಾ ಉತ್ಸವಕ್ಕೆ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆಂಬುದು ನಮಗೂ ಗೊತ್ತಿದೆ. ಆದರೆ, ಇದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ. ಇದು ಅಕ್ಷಮ್ಯ ಅಪರಾಧ. ಡಿಕೆಶಿ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.