March 4, 2026
Wednesday, March 4, 2026
spot_img

ಭೀಕರ ಅಪಘಾತ: ಟಿಪ್ಪರ್-ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ಮುಂಡಗೋಡ:

ತಾಲೂಕಿನ ಬಾಚಣಕಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲೂಕಿನ ಜೇನಮುರಿ ಗ್ರಾಮದ ಬಾಗು ತಿಂಗಳೆ (45) ಮೃತ ದುರ್ದೈವಿ.

ಕಡಿ ತುಂಬಿಕೊಂಡು ಮುಂಡಗೋಡ ಮಾರ್ಗವಾಗಿ ಚಲಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !