ಹೊಸದಿಗಂತ ಡಿಜಿಟಲ್ ಡೆಸ್ಕ್:
T20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಬುಧವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮುಖಾಮುಖಿಯಾಗಿವೆ.
ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆಫ್ರಿಕಾ ತಂಡ ಮೂರು ಬದಲಾವಣೆ ಮಾಡಿಕೊಂಡಿದೆ. ಕೊನೆಯ ಸೂಪರ್ 8 ಪಂದ್ಯದಲ್ಲಿ ಆಡಿದ್ದ ಜಾರ್ಜ್ ಲಿಂಡೆ, ಎನ್ರಿಚ್ ನಾರ್ಕಿಯಾ ಹಾಗೂ ಕ್ವೆನಾ ಎಂಫಾಕ ಹೊರಗುಳಿದರೆ, ಇವರ ಸ್ಥಾನಕ್ಕೆ ಮಾರ್ಕೊ ಜಾನ್ಸನ್, ಕೇಶವ್ ಮಹಾರಾಜ್, ಕಗಿಸೋ ರಬಾಡ ತಂಡಕ್ಕೆ ಮರಳಿದ್ದಾರೆ.
ಅತ್ತ ನ್ಯೂಜಿಲ್ಯಾಂಡ್ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಸ್ಪಿನ್ನರ್ ಇಶ್ ಸೋಧಿ ತಂಡದಿಂದ ಹೊರಗುಳಿದರೆ, ಅವರ ಸ್ಥಾನಕ್ಕೆ ಆಲ್ರೌಂಡರ್ ಜಿಮ್ಮಿ ನಿಶಾಮ್ ಅವಕಾಶ ಪಡೆದುಕೊಂಡಿದ್ದಾರೆ.
ನ್ಯೂಜಿಲೆಂಡ್ ಪ್ಲೇಯಿಂಗ್ XI: ಟಿಮ್ ಸೀಫರ್ಟ್, ಫಿನ್ ಅಲೆನ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಿಮ್ಮಿ ನೀಶಮ್, ಕೋಲ್ ಮೆಕ್‌ಕೊಂಚಿ, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ XI: ಐಡೆನ್ ಮಾರ್ಕ್ರಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ



