ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ .
ಫಿನ್ ಅಲೆನ್ ಸಿಡಿಸಿದ ಸ್ಫೋಟಕ ಶತಕದ ನೆರವಿನಿಂದ ನ್ಯೂಜಿಲ್ಯಾಂಡ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿ 2ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
170 ರನ್ಗಳ ಗುರಿಯನ್ನ ಬೆನ್ನಟ್ಟಿದ ಕಿವೀಸ್ ಕೇವಲ 17.5 ಓವರ್ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ತಲುಪಿತು. ಆರಂಭಿಕ ಆಟಗಾರ ಫಿನ್ ಅಲೆನ್ 33 ಎಸೆತಗಳಲ್ಲಿ 10 ಬೌಂಡರಿ, 8 ಸಿಕ್ಸರ್ಗಳ ಸಹಿತ ಅಜೇಯ 100 ರನ್ಗಳಿಸಿ ತಂಡವನ್ನ ಗೆಲುವಿನ ಗಡಿ ದಾಟಿಸಿದರು. ಟಿಮ್ ಸೀಫರ್ಟ್ 33 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಿತ 58 ರನ್ಗಳಿಸಿದರು.



