March 5, 2026
Thursday, March 5, 2026
spot_img

ಖಮೇನಿ ಹತ್ಯೆ ಕುರಿತು ವಿವಾದಾತ್ಮಕ ಪೋಸ್ಟ್‌: ಸಂಸದ, ಶ್ರೀನಗರದ ಮಾಜಿ ಮೇಯರ್ ಮೇಲೆ ಎಫ್‌ಐಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಉಂಟಾದ ಉದ್ವಿಗ್ನತೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ತೀವ್ರಗೊಂಡಿದೆ.

ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಯಲ್ಲಿ ಖಮೇನಿ ಸಾವಿನ ಬಳಿಕ ಕಣಿವೆಯ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಖಮೇನಿ ಹತ್ಯೆ ಕುರಿತಾಗಿ ವಿವಾದಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಜೀಮ್ ಮಟ್ಟು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ:

ಈ ಪೋಸ್ಟ್‌ಗಳು ಜನರಲ್ಲಿ ತಪ್ಪು ಸಂದೇಶ ಹರಡಬಹುದೆಂಬ ಕಾರಣದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಮೇನಿ ಸಾವನ್ನು ಖಂಡಿಸಿ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಹಲವು ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಸಭೆಗಳು ಮತ್ತು ಗುಂಪು ಸೇರುವುದರ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !