ಹೊಸದಿಗಂತ ವರದಿ ಬೆಳಗಾವಿ:
ಚಿಕ್ಕೋಡಿ ತಾಲೂಕಿನ ಮಾಜರೇಯ ಯಡೂರ ಕ್ಷೇತ್ರದ ವಿರಭದ್ರೆಶ್ವರ ದೇವಸ್ಥಾನದ ರಾಜಗೋಪುರ, ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಉಪರಾಷ್ಟ್ರಪತಿಗಳು ಆಗಮಿಸುವ ಹಿನ್ನಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಮೀ ಪ್ರದೇಶದ ಸುತ್ತಮುತ್ತಲಿನ ಪ್ರದೇಶಕ್ಕೆ ರೆಡ್ ಝೋನ್ ಘೋಷಣೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ತಿಳಿಸಿದ್ದಾರೆ.
ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಝೋನ್ (Red Zone) ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ:
ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಡ್ರೋನ್ /ಅನ್ ಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.



