March 5, 2026
Thursday, March 5, 2026
spot_img

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟರ್: ಬೆಂಗಳೂರಿನಲ್ಲಿ ಅದ್ಧೂರಿ ಮದುವೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ತಂಡದ ಪ್ರತಿಭಾವಂತ ವೇಗದ ಬೌಲರ್ ವೈಶಾಕ್ ವಿಜಯ್‌ಕುಮಾರ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ತಮ್ಮ ದೀರ್ಘಕಾಲದ ಗೆಳತಿ ಸಾಗರಿಕಾ ಅವರೊಂದಿಗೆ ವಿವಾಹ ಬಂಧನಕ್ಕೆ ಒಳಗಾದರು. ಕುಟುಂಬಸ್ಥರು, ಆಪ್ತರು ಹಾಗೂ ಕ್ರಿಕೆಟ್ ಲೋಕದ ಗಣ್ಯರು ಈ ವೈವಾಹಿಕ ಸಂಭ್ರಮಕ್ಕೆ ಸಾಕ್ಷಿಯಾದರು.

ನಗರದ ಖ್ಯಾತ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿ ನವ ದಂಪತಿಗೆ ಶುಭ ಹಾರೈಸಿದರು. ವಿಶೇಷವಾಗಿ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಕಾರ್ಯಕ್ರಮಕ್ಕೆ ಆಗಮಿಸಿ ವೈಶಾಕ್ ಮತ್ತು ಸಾಗರಿಕಾ ದಂಪತಿಗೆ ಆಶೀರ್ವಾದ ನೀಡಿದರು. ಅವರ ಭೇಟಿ ಮದುವೆ ಮನೆಯ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿತು.

ಇದನ್ನೂ ಓದಿ:

ವೈಶಾಕ್ ವಿಜಯ್‌ಕುಮಾರ್ ಅವರ ಕ್ರಿಕೆಟ್ ಪಯಣ ಸ್ಫೂರ್ತಿದಾಯಕವಾಗಿದೆ. ಆರಂಭದಲ್ಲಿ ಬ್ಯಾಟರ್ ಆಗಿ ಕ್ರಿಕೆಟ್ ಆಡುತ್ತಿದ್ದ ಅವರು ಬಳಿಕ ವೇಗದ ಬೌಲರ್ ಆಗಿ ತಮ್ಮ ಪ್ರತಿಭೆಯನ್ನು ತೋರಿಸಿದರು. ಮಗನ ಕನಸಿಗಾಗಿ ತಂದೆ ತಮ್ಮ ಉದ್ಯೋಗವನ್ನೇ ತ್ಯಜಿಸಿದ್ದ ಘಟನೆ ವೈಶಾಕ್ ಅವರ ಜೀವನದಲ್ಲಿ ಪ್ರಮುಖ ತಿರುವು ತಂದಿತು.

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೂಲಕ ಗಮನ ಸೆಳೆದ ವೈಶಾಕ್, ನಂತರ ಪಂಜಾಬ್ ಕಿಂಗ್ಸ್ ತಂಡಕ್ಕೂ ಆಯ್ಕೆಯಾಗಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ 100ಕ್ಕೂ ಹೆಚ್ಚು ವಿಕೆಟ್ ಪಡೆದಿರುವ ಅವರು ಡೆತ್ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಸಾಮರ್ಥ್ಯದಿಂದ ಗಮನ ಸೆಳೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !