ಹೊಸದಿಗಂತ ವರದಿ ಯಾದಗಿರಿ:
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರು ಬುಧವಾರ ರಾತ್ರಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬುಧವಾರ ರಾತ್ರಿ ಶಹಾಪುರ ಸಿಪಿಐ ಕಚೇರಿಗೆ ಬಂದಿದ್ದ ಮುತ್ಯಾಗೆ, ಗುರುವಾರವೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು. ಅದರಂತೆ ಇಂದು (ಗುರುವಾರ) ಮಧ್ಯಾಹ್ನ 3 ಗಂಟೆಯ ನಂತರ ಅವರು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲಿದ್ದಾರೆ.
ವಿಚಾರಣೆಯ ನಂತರ ಪೊಲೀಸರು ಮಲ್ಲಿಕಾರ್ಜುನ ಮುತ್ಯಾ ಅವರ ವೈದ್ಯಕೀಯ ತಪಾಸಣೆಯನ್ನು ನಡೆಸಲಿದ್ದಾರೆ.
ತನಿಖೆಗೆ ಸಹಕರಿಸದಿದ್ದರೆ ಬಂಧನಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಮುತ್ಯಾ ಅವರು ಸ್ವತಃ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಶಹಾಪುರ ಗ್ರಾಮೀಣ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣನವರ ಅವರ ನೇತೃತ್ವದಲ್ಲಿ ಈ ಪ್ರಕರಣದ ಸಮಗ್ರ ತನಿಖೆ ನಡೆಯುತ್ತಿದೆ.



