September 22, 2026
Tuesday, September 22, 2026
spot_img

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್: ನೂತನ ಜೋಡಿಗೆ ದಿಗ್ಗಜ ಕ್ರಿಕೆಟಿಗರಿಂದ ಶುಭಹಾರೈಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಹಲವು ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭಹಾರೈಸಿದರು.

ಅರ್ಜುನ್ ಮತ್ತು ಸಾನಿಯಾ ಕೆಂಪು ಬಣ್ಣದ ಉಡುಪುಗಳನ್ನು ಧರಿಸಿದ್ದಾರೆ. ಅರ್ಜುನ್ ಕೆಂಪು ಬಣ್ಣದ ಕುರ್ತಾ ಧರಿಸಿದ್ದರೆ, ಸಾನಿಯಾ ಸುಂದರವಾದ ಕೆಂಪು ಬಣ್ಣದ ಸೀರೆಯನ್ನು ಧರಿಸಿದ್ದಾರೆ. ಇಡೀ ತೆಂಡೂಲ್ಕರ್ ಕುಟುಂಬವು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಮದುವೆ ಸಂಭ್ರಮಿಸಿದರು.

ಮಾರ್ಚ್ 3 ರಂದು ಮುಂಬೈನ ಮಹಾಲಕ್ಷ್ಮಿ ರೇಸ್ ಕೋರ್ಸ್‌ನಲ್ಲಿ ಮೆಹಂದಿ ಸಮಾರಂಭ ನಡೆಯಿತು. ಅಲ್ಲಿ ಅನೇಕ ಕ್ರಿಕೆಟ್ ದಿಗ್ಗಜರು ಉಪಸ್ಥಿತರಿದ್ದರು. ಸಚಿನ್ ಅವರ ಆಪ್ತರು, ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಮೆಹಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !