April 24, 2026
Friday, April 24, 2026
spot_img

ಕಾಂಗ್ರೆಸ್ ಗೆ ಶಾಕ್: ಮೂವರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂನ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಭರದ ಸಿದ್ಧತೆ ನಡೆಸುತ್ತಿದೆ. ಇದರ ನಡುವೆ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಮೂವರು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ .

ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪಬಿತ್ರ ಮಾರ್ಗರಿಟಾ ಅವರ ಸಮ್ಮುಖದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರು ಕಾಂಗ್ರೆಸ್ ನ ಮೂರು ಶಾಸಕಾರದ ಕಮಲಾಖ್ಯ ದೇ ಪುರಕಾಯಸ್ಥ, ಸಶಿಕಾಂತ ದಾಸ್ ಮತ್ತು ಬಸಂತ ದಾಸ್ ಅವರನ್ನು ಕೇಸರಿ ಪಕ್ಷಕ್ಕೆ ಬರಮಾಡಿಕೊಂಡರು.

ಇದೇ ವೇಳೆ ಕಾಂಗ್ರೆಸ್‌ನ ಮಾಜಿ ಜಂಟಿ ಕಾರ್ಯದರ್ಶಿ ಪಾರ್ಷ ಬಾಬ್ ಕಲಿತಾ ಮತ್ತು ತೃಣಮೂಲ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕಂಕನ್ ನಾಥ್ ಅವರು ಬಿಜೆಪಿ ಸೇರಿದರು.

ಇಂದು ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರಿದ್ದಾರೆ ಮತ್ತು ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.

“ಅವರು ಬೇಷರತ್ತಾಗಿ ಬಿಜೆಪಿಗೆ ಸೇರಿದ್ದಾರೆ. ಪಕ್ಷದಲ್ಲಿ ಹೊಸ ಅಥವಾ ಹಳೆಯ ಸದಸ್ಯರು ಅಂತ ಏನೂ ಇಲ್ಲ. ಪಕ್ಷದೊಳಗೆ ನಾವೆಲ್ಲರೂ ಒಂದೇ” ಎಂದು ಮುಖ್ಯಮಂತ್ರಿ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !