March 5, 2026
Thursday, March 5, 2026
spot_img

ಟಿ20 ವಿಶ್ವಕಪ್ | ನಿರ್ಣಾಯಕ ಪಂದ್ಯದಲ್ಲೂ ಕೈಕೊಟ್ಟ ಅಭಿಷೇಕ್ ಶರ್ಮಾ: ಫ್ಯಾನ್ಸ್ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಟೀಂ ಇಂಡಿಯಾ ಅಬ್ಬರಿಸುತ್ತಿದ್ದು, ಆದರೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೆ ಕೈಕೊಟ್ಟಿದ್ದಾರೆ.

ಇಡೀ ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಶರ್ಮ, ದೊಡ್ಡ ಹೊಡೆತವನ್ನು ಆಡುವ ಯತ್ನದಲ್ಲಿ ವಿಕೆಟ್ ಕಳೆದುಕೊಂಡಿದ್ದಾರೆ. ಅಭಿಷೇಕ್​ ಶರ್ಮಾ ಬ್ಯಾಟಿಂಗ್​ ವೈಖರಿ ಬಗ್ಗೆ ಕ್ರಿಕೆಟ್​ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !