Saturday, August 30, 2025

ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ : ನಿಮ್ಮ ಏರಿಯಾದಲ್ಲಿ ಕರೆಂಟ್‌ ಇದ್ಯಾ ನೋಡ್ಕೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ,ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಲಕ್ಷ್ಮೀ ನಗರ, HVKಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, VJSSಲೇಔಟ್, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖ ಹೋಮ್ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್,ESI ಹಾಸ್ಪಿಟಲ್, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಇಸ್ಕಾನ್, BNES ಕಾಲೇಜು, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ