March 6, 2026
Friday, March 6, 2026
spot_img

ಗೌರ್ನಮೆಂಟ್‌ ಬಸ್‌ ಸ್ಟ್ಯಾಂಡ್‌ಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ನೇರಪ್ರಸಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಕೆಲಸಕ್ಕೆ ಹೋಗುವವರು, ಊರಿಗೆ ಹೋಗುವವರು ಬಜೆಟ್‌ ನೋಡೋಕೆ ಆಗದೇ ಇರಬಹುದು.

ಎಲ್ಲರಿಗೂ ಬಜೆಟ್‌ ನೋಡುವ ಅವಕಾಶ ನೀಡಲು ಮುಂದಾಗಿರುವ ಸರ್ಕಾರ ರಾಜ್ಯದ 230 ಸರ್ಕಾರಿ ಬಸ್‌ ಸ್ಟ್ಯಾಂಡ್‌ಗಳಲ್ಲಿನ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಆಯ್ದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್‍ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾ. 6ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !