April 30, 2026
Thursday, April 30, 2026
spot_img

ನಗರಗಳ ನವೋದಯ: ಮೂಲಸೌಕರ್ಯ, ರಸ್ತೆ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮತ್ತು ಸಂಚಾರ ದಟ್ಟಣೆ ನಿವಾರಣೆಗೆ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಿದೆ. ಮುಖ್ಯವಾಗಿ ರಸ್ತೆ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈ ಕೆಳಗಿನ ಯೋಜನೆಗಳಿಗೆ ಅನುದಾನ ಮೀಸಲಿಡಲಾಗಿದೆ:

ಜಿಬಿಎ (GBA) ವ್ಯಾಪ್ತಿಯ 5 ನಗರ ಪಾಲಿಕೆಗಳ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು ಸರ್ಕಾರವು 1,255 ಕೋಟಿ ರೂಪಾಯಿಗಳನ್ನು ಘೋಷಿಸಿದೆ. ಇದರಿಂದ ನಗರದ ಜನರಿಗೆ ಉತ್ತಮ ನಾಗರಿಕ ಸೌಲಭ್ಯಗಳು ದೊರೆಯಲಿವೆ.

ದೀರ್ಘಕಾಲ ಬಾಳಿಕೆ ಬರುವ ಮತ್ತು ಗುಣಮಟ್ಟದ ರಸ್ತೆಗಳಿಗಾಗಿ 158 ಕಿ.ಮೀ ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ 1,700 ಕೋಟಿ ರೂಪಾಯಿ ವ್ಯಯಿಸಲಾಗುವುದು.

ನಗರದ ಪ್ರಮುಖ ಸಂಪರ್ಕ ಕೊಂಡಿಗಳಾದ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಬರೋಬ್ಬರಿ 1,936 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ. ಈ ಯೋಜನೆಯಿಂದ ಸುಗಮ ಸಂಚಾರಕ್ಕೆ ಹಾದಿ ಸುಗಮವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !