April 30, 2026
Thursday, April 30, 2026
spot_img

ಸಿರಿಧಾನ್ಯ ಸೇವಿಸಿ ಆರೋಗ್ಯ ಉಳಿಸಿಕೊಳ್ಳಿ, ಮಿಲೆಟ್‌ ಹಬ್‌ ನಿರ್ಮಾಣಕ್ಕೆ ಸಿಎಂ ಗ್ರೀನ್‌ ಸಿಗ್ನಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿರಿಧಾನ್ಯ ಸೇವನೆಯಿಂದಾಗಿ ಆರೋಗ್ಯಕ್ಕೆ ಲಾಭ ಇದೆ, ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್‌ ಹಬ್‌ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಇದರ ಜೊತೆಗೆ 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ ಎಂದಿದ್ದಾರೆ.

ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ  2026ರ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !