January19, 2026
Monday, January 19, 2026
spot_img

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ : ಹಲವರು ನಾಪತ್ತೆ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್ ದೇವಾಲಯ ಮುಳುಗಡೆಯಾಗಿದೆ.

ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಯಾತ್ರಿಕರನ್ನು ಪರ್ಯಾಯ ಮಾರ್ಗಗಳ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇನ್ನೂ ಕೇದಾರನಾಥ ಕಣಿವೆಯ ಲಾವಾರಾ ಗ್ರಾಮದಲ್ಲಿಯೂ ಭೀಕರ ಪ್ರವಾಹ ಉಂಟಾಗಿದೆ. ಪರಿಣಾಮ ರಸ್ತೆಯ ಸೇತುವೆಯೊಂದು ಕೊಚ್ಚಿಹೋಗಿದ್ದು, ಚೆನಾಗಡ್‌ನಲ್ಲಿಯೂ ಗಂಭೀರ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯ ಹಿನ್ನೆಲೆ ರುದ್ರಪ್ರಯಾಗ, ಬಾಗೇಶ್ವರ, ಚಮೋಲಿ, ಹರಿದ್ವಾರ ಮತ್ತು ಪಿಥೋರಗಢ ಜಿಲ್ಲೆಗಳಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

Must Read

error: Content is protected !!