March 7, 2026
Saturday, March 7, 2026
spot_img

ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ ಆಗಲಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚ 20 ರೂ.ಗೆ ಹೆಚ್ಚಳ ಮಾಡಲಾಗಿದೆ.

ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !