ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿನ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳ ಪೈಕಿ 14 ಸಾವಿರಕ್ಕೂ ಹೆಚ್ಚಿನ ಸಂಘಗಳು ಸಾಲ ವಸೂಲಾತಿ ಸೇರಿ ಮತ್ತಿತರ ಕಾರಣಗಳಿಂದಾಗಿ ನಷ್ಟದಲ್ಲಿದ್ದು, ಅವುಗಳನ್ನು ಆರ್ಥಿಕ ಸಬಲಗೊಳಿಸಲು ಸಾಲ ವಸೂಲಾತಿಗೆ ಹೆಚ್ಚಿನ ಒತ್ತು ನೀಡಬೇಕು. ಸಹಕಾರಿ ವ್ಯವಸ್ಥೆ ಗಟ್ಟಿಗೊಳ್ಳುವಂತೆ ಎಲ್ಲ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯದಲ್ಲಿ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳ ಪೈಕಿ 14,670 ಸಂಘಗಳು ನಷ್ಟದಲ್ಲಿವೆ. ಅದರಲ್ಲಿ 2,200 ಹಾಲು ಉತ್ಪಾದಕ ಸಂಘಗಳೂ ಸೇರಿವೆ. ಇಷ್ಟು ದೊಡ್ಡ ಪ್ರಮಾಣದ ಸಹಕಾರ ಸಂಘಗಳು ನಷ್ಟದಲ್ಲಿರುವುದು ಸಹನೀಯವಲ್ಲ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿವೆ. ಅಂತಹ ಸಂಘಗಳ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾವಹಿಸಿ, ಹಾಲು ಉತ್ಪಾದನೆ ಹೆಚ್ಚಿಸಲು ಸಂಘದ ಕಾರ್ಯದರ್ಶಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ನಷ್ಟದಲ್ಲಿರುವ 14,000 ಸಹಕಾರ ಸಂಘಗಳು ಆರ್ಥಿಕ ಸಬಲೀಕರಣಕ್ಕೆ ಸೂಚನೆ ನೀಡಿದ ಸಿಎಂ
