July 10, 2026
Friday, July 10, 2026
spot_img

ಒಂದೇ ಬಾರಿ ʼಕರ್ನಾಟಕ ಪಬ್ಲಿಕ್‌ ಸ್ಕೂಲ್‌ʼಗಳಾಗಿ ಬದಲಾಗಲಿವೆ 800 ಸರ್ಕಾರಿ ಸ್ಕೂಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮುಂದಿನ 3 ವರ್ಷಗಳಲ್ಲಿ ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ರೂ.3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಈ ನಿರ್ಧಾರ ಮಾಡಲಾಗಿದೆ.

ಅಷ್ಟೇ ಅಲ್ಲದೆ ಸರ್ಕಾರಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ ರೂ.565 ಕೋಟಿ, ಶೌಚಾಲಯ ನಿರ್ಮಾಣಕ್ಕಾಗಿ ರೂ.75 ಕೋಟಿ ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು ರೂ.25 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !