July 10, 2026
Friday, July 10, 2026
spot_img

ಬಂಜಾರ ಕಮ್ಯುನಿಟಿ ಇತಿಹಾಸ, ಸಂಸ್ಕೃತಿ ಜಗತ್ತಿಗೆ ತಿಳಿಸಲು ʼಬಂಜಾರ ವಿಶ್ವಕೋಶʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಣೆ ವೇಳೆ ಗೋರ್‌ ಬಂಜಾರ ಸಮುದಾಯಕ್ಕೆ ಗುಡ್‌ನ್ಯೂಸ್‌ ನೀಡಿದ್ದಾರೆ.

ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮಕ್ಕಳಿಗಾಗಿ ಪಂಪ, ರನ್ನ, ಜನ್ನ, ಬಸವಾದಿ ಶರಣರು, ಸರ್ವಜ್ಞ, ಕನಕ, ಪುರಂದರ, ಲಕ್ಷ್ಮೀಶ, ಸಂಚಿ ಹೊನ್ನಮ್ಮ ಇತ್ಯಾದಿ ಪ್ರಾಚೀನ ಕವಿಗಳ ಹಾಗೂ ಕುವೆಂಪು, ಶಿವರಾಮ ಕಾರಂತ, ದೇವನೂರು ಮಹದೇವ ಮುಂತಾದವರ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !