August 20, 2026
Thursday, August 20, 2026
spot_img

ಮಕ್ಕಳಿಗೆ ಸೋಶಿಯಲ್‌ ಮೀಡಿಯಾ ಬ್ಯಾನ್‌ ಮಾಡಿ ಒಳ್ಳೆ ಕೆಲಸ ಮಾಡಿದ್ರಿ : ಪೋಷಕರ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಲೆ ಮುಗಿಸಿ ಮನೆಗೆ ಬಂದ ತಕ್ಷಣ ಪೋಷಕರನ್ನು ಕಾಡಿ ಬೇಡಿಯಾದ್ರೂ ಮಕ್ಕಳು ಮೊಬೈಲ್‌ ಮುಟ್ಟುತ್ತಾರೆ. ಸಣ್ಣ ವಯಸ್ಸಿಗೇ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮೆದುಳಿನ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಈ ಎಲ್ಲವನ್ನೂ ಅರಿತುಕೊಂಡು ಸರ್ಕಾರ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬ್ಯಾನ್‌ ಮಾಡಿದೆ.

ಈ ನಡೆಯನ್ನು ಪೋಷಕರು ಸ್ವಾಗತಿಸಿದ್ದಾರೆ. ಪೋಷಕರು ಮಾಡಲು ಕಷ್ಟವಾಗುತ್ತಿದ್ದ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ದೊಡ್ಡವರಿಗೂ ಟೈಮ್‌ ಲಿಮಿಟ್‌ ಲಿಮಿಟ್‌ ಮಾಡಿ. ಸರ್ಕಾರಿ ಕೆಲಸಗಳ ರೀತಿ ಬೆಳಗ್ಗೆಯಿಂದ ಸಂಜೆವರೆಗೂ ಮಾತ್ರ ಬಳಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು,. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ.

ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನವಾಗಿದ್ದು, ಕೇಂದ್ರ ಸರ್ಕಾರದ ಆರ್ಥೀಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !