August 19, 2026
Wednesday, August 19, 2026
spot_img

ಖುಷಿಯಾಯ್ತು ಪೊಲೀಸ್‌ ಇಲಾಖೆ: ರಾಜ್ಯದಲ್ಲಿ 12 ಹೊಸ ಠಾಣೆಗಳ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ.

ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ.

ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು ಒದಗಿಸಲು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದು, ಹೊಸ ಠಾಣೆಗಳ ಕಾರ್ಯಾಚರಣೆಗಾಗಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !