July 21, 2026
Tuesday, July 21, 2026
spot_img

ಬಾತ್​​ರೂಮ್​ನಲ್ಲೇ ಮಗುವಿಗೆ ಜನ್ಮ ನೀಡಿದ ವಸತಿ ಶಾಲೆ ವಿದ್ಯಾರ್ಥಿನಿ ಕೇಸ್ : ನಾಲ್ವರ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ಯಾದಗಿರಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಶೌಚಾಲಯದೊಳಗೆ 9 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು‌ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನುವ ಪ್ರಕರಣ ಆಘಾತಕಾರಿ ವಿಚಾರವಾಗಿದೆ. ಬಾತ್​ರೂಮ್​ನಲ್ಲಿ ಹೆರಿಗೆ ಬಳಿಕ ವಿದ್ಯಾರ್ಥಿನಿ ಹಾಗೂ ನವಜಾತ ಶಿಶು ಇಬ್ಬರನ್ನ ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿಂದ ನಾಲ್ವರನ್ನು ಅಮಾನತು ಮಾಡಲಾಗಿದೆ.

ಶಹಾಪುರದಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಾಗಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ವರ್ಗದ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ಆಗಿದೆ.

ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತನ ಆರೋಪದಡಿ ವಸತಿ ನಿಲಯದ ವಾರ್ಡನ್ ಗೀತಾ, ಸ್ಟಾಪ್ ನರ್ಸ್ ಕಾವೇರಮ್ಮ, ಮತ್ತು ಪ್ರಾಂಶುಪಾಲರಾದ ಬಸ್ಸಮ್ಮ ಪಾಟೀಲ ಸೇರಿದಂತೆ ಈ ನಾಲ್ವರನ್ನು ಸಸ್ಪೆಂಡ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !