ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವಾರ ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಸಹಿತ ಮಿತ್ರ ಪಕ್ಷಗಳು ಮುಂದಾಗಿದ್ದು, ಈ ಹಿನ್ನೆಲೆ ಕಾಂಗ್ರೆಸ್, ಈ ಸಂಬಂಧ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದೆ.
ಸ್ಪೀಕರ್ ಓಂ ಬಿರ್ಲಾರ ಅವರ ಪದಚ್ಯುತಿ ಕೋರಿ ಸಲ್ಲಿಸಲಾಗಿರುವ ನೋಟಿಸ್ ಮುಂದಿನ ವಾರ ಚರ್ಚೆಗೆ ಬರುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಮಾರ್ಚ್ 9 ರಿಂದ 11 ರವರೆಗೆ ಕಡ್ಡಾಯವಾಗಿ ಲೋಕಸಭೆಯಲ್ಲಿ ಹಾಜರಿರಬೇಕು ಎಂದು ಸೂಚಿಸಿದೆ.
ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ಮತ್ತು ಮತದಾನ ನಡೆಯುವಾಗ ಓಂ ಬಿರ್ಲಾ ಅವರು ಸಭೆಯ ಅಧ್ಯಕ್ಷತೆ ವಹಿಸುವುದಿಲ್ಲ. ಬದಲಾಗಿ ಸದಸ್ಯರ ನಡುವೆ ಕುಳಿತುಕೊಳ್ಳಲಿದ್ದಾರೆ. ಈ ನಿರ್ಣಯದ ಚರ್ಚೆಯ ವೇಳೆ ಬಿರ್ಲಾ ಅವರು ತಮ್ಮನ್ನು ತಾವು ಸಮರ್ಥಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಅಷ್ಟೆ ಅಲ್ಲದೇ ನಿರ್ಣಯದ ವಿರುದ್ಧ ಮತ ಚಲಾಯಿಸುವ ಹಕ್ಕನ್ನು ಸಹ ಹೊಂದಿರುತ್ತಾರೆ.



