October 16, 2026
Friday, October 16, 2026
spot_img

ಇರಾನ್ ಗೆ ಶರಣಾಗತಿ ಒಂದೇ ಮಾರ್ಗ, ಬೇರೆ ಯಾವುದೇ ಒಪ್ಪಂದವಿಲ್ಲ: ಡೊನಾಲ್ಡ್ ಟ್ರಂಪ್ ಖಡಕ್ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಅದು ಬಿಟ್ಟು ಬೇರೆ ಯಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ ಟ್ರಂಪ್, ನಾವು ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತರಲು ಅವಿಶ್ರಾಂತವಾಗಿ ಕೆಲಸ ಮಾಡುತ್ತೇವೆ. ಅದನ್ನು ಆರ್ಥಿಕವಾಗಿ ಹಿಂದೆಂದಿಗಿಂತಲೂ ದೊಡ್ಡದಾಗಿ, ಉತ್ತಮ ಮತ್ತು ಬಲಶಾಲಿಯಾಗಿ ಮಾಡುತ್ತೇವೆ. ಇರಾನ್ ಉತ್ತಮ ಭವಿಷ್ಯವನ್ನು ಹೊಂದುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಆದರೆ ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಇಲ್ಲಿ ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ.

Must Read