ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಜನರಿಗೆ ಪೊಲೀಸ್ ಬಿಸಿ ಮುಟ್ಟಿಸಿದ್ದು, 200ಕ್ಕೂ ಅಧಿಕ ವಿದೇಶಿ ಪ್ರಜೆಗಳನ್ನು ಓಡಿಸಲಾಗಿದೆ.
ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.
ಈವರೆಗೂ ಒಟ್ಟಾರೆ 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದು, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಪತ್ತೆಯಾಗಿದ್ದಾರೆ. ಹಲವರ ಬಳಿ ಆಧಾರ್ ಕಾರ್ಡ್ ಕೂಡ ಇದೆ.
ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.



